John 19:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ, ಅರಿಮಥಾಯ ಊರಿನ ಯೋಸೇಫ ಎಂಬವನು ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಪಿಲಾತನನ್ನು ಕೇಳಿಕೊಂಡನು. (ಯೋಸೇಫನು ಯೇಸುವಿನ ಒಬ್ಬ ಅನುಯಾಯಿ ಆಗಿದ್ದನು. ಆದರೆ ಅವನು ಯೆಹೂದ್ಯರಿಗೆ ಹೆದರಿಕೊಂಡಿದ್ದರಿಂದ ಅದರ ಬಗ್ಗೆ ಜನರಿಗೆ ಹೇಳಿಕೊಳ್ಳಲಿಲ್ಲ.) ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗಲು ಪಿಲಾತನು ಅವನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.
Kannada BSI Bible 2016
ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು - ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಬೇಡಿಕೊಂಡನು. ಪಿಲಾತನು ಅಪ್ಪಣೆಕೊಡಲಾಗಿ ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.
Kannada Bible (KNCL) BSI 2016
ಅರಿಮತಾಯ ಊರಿನ ಜೋಸೆಫ್ ಎಂಬುವನೂ ಕೂಡ ಯೇಸುವಿನ ಶಿಷ್ಯರಲ್ಲಿ ಒಬ್ಬನು. ಈತನು ಯೆಹೂದ್ಯರಿಗೆ ಹೆದರಿ ತಾನು ಶಿಷ್ಯನೆಂದು ತೋರಿಸಿಕೊಳ್ಳುತ್ತಿರಲಿಲ್ಲ. ಮೇಲೆ ಹೇಳಿದ್ದೆಲ್ಲ ನಡೆದಾದ ಮೇಲೆ ಈತನು ಯೇಸುವಿನ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ಪಿಲಾತನಿಂದ ಅಪ್ಪಣೆ ಕೇಳಿದನು. ಪಿಲಾತನು ಒಪ್ಪಿಗೆ ಕೊಡಲು ಈತನು ಬಂದು ಪಾರ್ಥಿವ ಶರೀರವನ್ನು ಕೊಂಡೊಯ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೆಹೂದ್ಯರ ಭಯದ ನಿಮಿತ್ತದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.