John 19:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಿಲಾತನು ಮತ್ತೆ ಹೊರಗೆ ಬಂದು, ಯೆಹೂದ್ಯರಿಗೆ, “ನೋಡಿ! ನಾನು ಯೇಸುವನ್ನು ನಿಮ್ಮ ಬಳಿಗೆ ತರುತ್ತಿದ್ದೇನೆ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ ಎಂಬುದು ನಿಮಗೆ ತಿಳಿದಿರಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು.
Kannada BSI Bible 2016
ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಪಿಲಾತನು ತಿರಿಗಿ ಹೊರಗೆ ಬಂದು ಯೆಹೂದ್ಯರಿಗೆ - ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ಹೊರಗೆ ತರುತ್ತೇನೆ, ನೋಡಿರಿ ಎಂದು ಹೇಳಿದನು.
Kannada Bible (KNCL) BSI 2016
ಪಿಲಾತನು ಮತ್ತೆ ಹೊರಗೆ ಬಂದು ಯೆಹೂದ್ಯರಿಗೆ, “ನೋಡಿ, ನಾನು ಇವನನ್ನು ನಿಮ್ಮ ಮುಂದೆ ತರುತ್ತಿದ್ದೇನೆ. ನನಗೆ ಇವನಲ್ಲಿ ಯಾವ ಅಪರಾಧವೂ ಕಾಣಿಸುತ್ತಿಲ್ಲ ಎಂಬುದು ನಿಮಗೆ ತಿಳಿದಿರಲಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪಿಲಾತನು ತಿರುಗಿ ಹೊರಗೆ ಹೋಗಿ ಯೆಹೂದ್ಯರ ಗುಂಪಿಗೆ, “ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವಂತೆ ಆತನನ್ನು ನಿಮ್ಮ ಬಳಿಗೆ ತರುತ್ತೇನೆ,” ಎಂದನು.