John 19:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಇಬ್ಬರು ಯೇಸುವಿನ ದೇಹವನ್ನು ತೆಗೆದುಕೊಂಡು ಅದಕ್ಕೆ ಸುಗಂಧದ್ರವ್ಯವನ್ನು ಹಾಕಿ ನಾರುಬಟ್ಟೆಗಳಿಂದ ಸುತ್ತಿದರು. (ಯೆಹೂದ್ಯರು ಸತ್ತವರನ್ನು ಇದೇರೀತಿ ಸಮಾಧಿ ಮಾಡುತ್ತಾರೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.
Kannada BSI Bible 2016
ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.
Kannada Bible (KNCL) BSI 2016
ಇವರು ಯೇಸುವಿನ ಪಾರ್ಥಿವ ಶರೀರವನ್ನು ತೆಗೆದು, ಯೆಹೂದ್ಯರ ಶವಸಂಸ್ಕಾರದ ಪದ್ಧತಿಯಂತೆ ಸುಗಂಧ ದ್ರವ್ಯಗಳನ್ನು ಹಾಕಿ ನಾರುಮಡಿಯಲ್ಲಿ ಸುತ್ತಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಳುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರುಬಟ್ಟೆಗಳಲ್ಲಿ ಸುತ್ತಿದರು.