John 19:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು ಹೊರಗೆ ಬಂದನು. ಆತನ ತಲೆಯ ಮೇಲೆ ಮುಳ್ಳಿನ ಕಿರೀಟವನ್ನು ಇಟ್ಟಿದ್ದರು ಮತ್ತು ಕೆಂಪು ಅಂಗಿಯನ್ನು ಆತನಿಗೆ ತೊಡಿಸಿದ್ದರು. ಪಿಲಾತನು ಯೆಹೂದ್ಯರಿಗೆ, “ಇಗೋ, ಈ ಮನುಷ್ಯನು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.
Kannada BSI Bible 2016
ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆಂಪು ಒಲ್ಲಿಯನ್ನೂ ಧರಿಸಿದವನಾಗಿ ಹೊರಕ್ಕೆ ಬಂದನು. ಪಿಲಾತನು ಅವರಿಗೆ - ಇಗೋ, ಈ ಮನುಷ್ಯನು! ಅಂದನು.
Kannada Bible (KNCL) BSI 2016
ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆನ್ನೇರಳೆ ಬಣ್ಣದ ಅಂಗಿಯನ್ನೂ ಧರಿಸಿದವರಾಗಿ ಹೊರಕ್ಕೆ ಬಂದರು. ಪಿಲಾತನು, “ಇಗೋ, ಈ ಮನುಷ್ಯ!” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವರಾಗಿ ಹೊರಗೆ ಬಂದರು. ಪಿಲಾತನು ಅವರಿಗೆ, “ಇಗೋ, ಆ ಮನುಷ್ಯನು ಇವನೇ!” ಎಂದನು.