John 19:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಹಾಯಾಜಕರು ಮತ್ತು ಯೆಹೂದ್ಯ ಕಾವಲುಗಾರರು ಯೇಸುವನ್ನು ಕಂಡು, “ಅವನನ್ನು ಶಿಲುಬೆಗೆ ಹಾಕಿಸು! ಅವನನ್ನು ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಆದರೆ ಪಿಲಾತನು, “ನೀವೇ ಆತನನ್ನು ಶಿಲುಬೆಗೆ ಹಾಕಿರಿ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು.
Kannada BSI Bible 2016
ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕರೂ ಓಲೇಕಾರರೂ ಆತನನ್ನು ಕಾಣುತ್ತಲೇ - ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು ಅವರಿಗೆ - ಬೇಕಾದರೆ ನೀವೇ ಅವನನ್ನು ತಕ್ಕೊಂಡುಹೋಗಿ ಶಿಲುಬೆಗೆ ಹಾಕಿಸಿರಿ; ನನಗೆ ಅವನಲ್ಲಿ ಅಪರಾಧವು ಕಾಣಿಸಲಿಲ್ಲವೆಂದು ಹೇಳಿದನು.
Kannada Bible (KNCL) BSI 2016
ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ಕಂಡೊಡನೆ, “ಇವನನ್ನು ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಬೊಬ್ಬೆಹಾಕಿದರು. ಆಗ ಪಿಲಾತನು, “ಬೇಕಾದರೆ ನೀವೇ ಇವನನ್ನು ಕರೆದುಕೊಂಡು ಹೋಗಿ ಶಿಲುಬೆಗೇರಿಸಿ, ನನಗಾದರೋ ಇವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ,” ಎಂದನು.