John 19:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
Kannada BSI Bible 2016
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರು ಅವನಿಗೆ - ನಮಗೆ ಒಂದು ನೇಮ ಉಂಟು, ಆ ನೇಮದ ಪ್ರಕಾರ ಇವನು ಸಾಯತಕ್ಕವನು; ಯಾಕಂದರೆ ಅವನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯ ನಾಯಕರು ಅವನಿಗೆ, “ನಮಗೆ ಒಂದು ನಿಯಮವಿದೆ, ಆ ನಿಯಮದ ಪ್ರಕಾರ ಅವನು ಸಾಯಲೇಬೇಕು. ಏಕೆಂದರೆ ಅವನು ತನ್ನನ್ನು ದೇವರ ಪುತ್ರನನ್ನಾಗಿ ಮಾಡಿಕೊಂಡಿದ್ದಾನೆ,” ಎಂದರು.