John 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಜನರು ಉತ್ತಮವಾದ ದ್ರಾಕ್ಷಾರಸವನ್ನು ಯಾವಾಗಲೂ ಮೊದಲು ಹಂಚುತ್ತಾರೆ. ಅತಿಥಿಗಳು ಕುಡಿದು ಮತ್ತರಾದ ಮೇಲೆ ಅವರಿಗೆ ಕಡಿಮೆ ದರ್ಜೆಯ ದ್ರಾಕ್ಷಾರಸವನ್ನು ಕೊಡುತ್ತಾರೆ. ಆದರೆ ನೀನು ಉತ್ತಮವಾದ ದ್ರಾಕ್ಷಾರಸವನ್ನು ಈವರೆಗೂ ಇಟ್ಟಿರುವೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.
Kannada BSI Bible 2016
ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮದಲಿಂಗನನ್ನು ಕರೆದು - ಎಲ್ಲರು ಹಿರಿದಿನ ದ್ರಾಕ್ಷಾರಸವನ್ನು ಮೊದಲುಕೊಟ್ಟು ಅಮಲೇರಿದ ಮೇಲೆ ಕಿರಿದಿನ ದ್ರಾಕ್ಷಾರಸವನ್ನು ಕೊಡುತ್ತಾರೆ; ನೀನು ಹಿರಿದಿನ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿದ್ದೀ ಅಂದನು.
Kannada Bible (KNCL) BSI 2016
ಆದುದರಿಂದ ಅವನು ಮದುಮಗನನ್ನು ಕರೆದು, “ಜನರೆಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಹಂಚುತ್ತಾರೆ; ಅತಿಥಿಗಳು ಯಥೇಚ್ಛವಾಗಿ ಕುಡಿದಾದ ಮೇಲೆ ಸಾಧಾರಣ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದುದನ್ನು ಈವರೆಗೂ ಇಟ್ಟಿದ್ದೀಯಲ್ಲಾ!” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು.