John 2:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
Kannada BSI Bible 2016
ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಈ ಮೊದಲನೆಯ ಸೂಚಕಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
Kannada Bible (KNCL) BSI 2016
ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.