John 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ಕಪೆರ್ನೌಮ್ ಎಂಬ ಊರಿಗೆ ಹೋದನು. ಯೇಸುವಿನ ತಾಯಿ ಮತ್ತು ಸಹೋದರರು ಹಾಗೂ ಆತನ ಶಿಷ್ಯರು ಆತನೊಡನೆ ಹೋದರು. ಅವರೆಲ್ಲರೂ ಕಪೆರ್ನೌಮ್‌ನಲ್ಲಿ ಕೆಲವು ದಿನ ತಂಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.
Kannada BSI Bible 2016
ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದ ಮೇಲೆ ಆತನೂ ಆತನ ತಾಯಿಯೂ ತಮ್ಮಂದಿರೂ ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌವಿುಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
Kannada Bible (KNCL) BSI 2016
ಇದಾದ ಮೇಲೆ ಯೇಸು, ಅವರ ತಾಯಿ, ಸಹೋದರರು ಮತ್ತು ಶಿಷ್ಯರು ಕಪೆರ್ನವುಮಿಗೆ ಹೋಗಿ ಅಲ್ಲಿ ಕೆಲವು ದಿನ ತಂಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ ಯೇಸು ತಮ್ಮ ತಾಯಿ, ಸಹೋದರರು ಮತ್ತು ಶಿಷ್ಯರೊಡನೆ ಕಪೆರ್ನೌಮಿಗೆ ಹೋದರು. ಅಲ್ಲಿ ಅವರು ಕೆಲವು ದಿವಸ ಇದ್ದರು.