John 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವಾಲಯದಲ್ಲಿ ಜನರು ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುತ್ತಿರುವುದನ್ನು ಯೇಸು ಕಂಡನು. ಇತರ ಕೆಲವು ಜನರು ಮೇಜುಗಳ ಸಮೀಪದಲ್ಲಿ ಕುಳಿತುಕೊಂಡು ಹಣ ವಿನಿಮಯ ಮಾಡುತ್ತಿದ್ದರು ಮತ್ತು ವ್ಯಾಪಾರ ಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.
Kannada BSI Bible 2016
ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ದೇವಾಲಯದೊಳಗೆ ದನ ಕುರಿ ಪಾರಿವಾಳ ಮಾರುವವರನ್ನೂ ಕೂತಿರುವ ಚಿನಿವಾರರನ್ನೂ ಕಂಡು ಹಗ್ಗದಿಂದ ಕೊರಡೆ ಮಾಡಿ
Kannada Bible (KNCL) BSI 2016
ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದೇವಾಲಯದ ಅಂಗಳದಲ್ಲಿ ದನ, ಕುರಿ ಹಾಗೂ ಪಾರಿವಾಳಗಳನ್ನು ಮಾರುವವರೂ ಹಣ ಬದಲಾಯಿಸುವವರೂ ಕುಳಿತಿರುವುದನ್ನು ಕಂಡರು.