John 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಹಗ್ಗದ ಕೆಲವು ತುಂಡುಗಳನ್ನು ತೆಗೆದುಕೊಂಡು ಅವುಗಳಿಂದ ಒಂದು ಚಾವಟಿ ಮಾಡಿ ಆ ಜನರನ್ನು ಮತ್ತು ದನಕುರಿಗಳನ್ನು ಬಲವಂತವಾಗಿ ದೇವಾಲಯದಿಂದ ಹೊರಗಟ್ಟಿದನು. ಯೇಸು ಮೇಜುಗಳನ್ನು ಕೆಡವಿ, ಹಣ ವಿನಿಮಯ ಮಾಡುತ್ತಿದ್ದ ಜನರ ಹಣವನ್ನು ಚೆಲ್ಲಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.
Kannada BSI Bible 2016
ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಿಂದ ಕುರಿ ದನ ಸಹಿತ ಎಲ್ಲರನ್ನು ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ರೊಕ್ಕವನ್ನು ಚೆಲ್ಲಿ ಮೇಜುಗಳನ್ನು ಕೆಡವಿದನು.
Kannada Bible (KNCL) BSI 2016
ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು. ದನಕುರಿಗಳನ್ನು ಓಡಿಸಿದರು. ನಾಣ್ಯ ವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಹಗ್ಗಗಳಿಂದ ಕೊರಡೆ ಮಾಡಿ ಕುರಿ, ದನ ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ, ಹಣ ಬದಲಾಯಿಸುವವರ ನಾಣ್ಯಗಳನ್ನು ಮತ್ತು ಮೇಜುಗಳನ್ನು ಕೆಡವಿದರು.