John 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವುಗಳನ್ನು ಹೊರಗೆ ತೆಗೆದುಕೊಂಡು ಹೋಗಿರಿ! ನನ್ನ ತಂದೆಯ ಮನೆಯನ್ನು ವ್ಯಾಪಾರ ಸ್ಥಳವನ್ನಾಗಿ ಮಾಡಬೇಡಿ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.
Kannada BSI Bible 2016
ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾರಿವಾಳ ಮಾರುವವರಿಗೆ - ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ಸಂತೆ ಮಾಡಬೇಡಿರಿ ಎಂದು ಹೇಳಿದನು.
Kannada Bible (KNCL) BSI 2016
ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಪಾರಿವಾಳ ಮಾರುವವರಿಗೆ, “ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ,” ಎಂದರು.