John 2:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನ ಆಲಯದ ಮೇಲಿನ ಅಭಿಮಾನವು ನನ್ನೊಳಗೆ ಬೆಂಕಿಯಂತೆ ಸುಡುತ್ತದೆ” \rq ಕೀರ್ತನೆ 69:9\rq*
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.
Kannada BSI Bible 2016
ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ - ನಿನ್ನ ಆಲಯಾಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತದೆ ಎಂದು ಬರೆದ ಮಾತು ಶಿಷ್ಯರ ನೆನಪಿಗೆ ಬಂತು.
Kannada Bible (KNCL) BSI 2016
‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಶಿಷ್ಯರು, “ನಿನ್ನ ಆಲಯದ ಮೇಲಿನ ಆಸಕ್ತಿಯು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,” ಎಂದು ಪವಿತ್ರ ವೇದದಲ್ಲಿ ಬರೆದಿರುವುದನ್ನು ಜ್ಞಾಪಕಮಾಡಿಕೊಂಡರು.