John 2:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಸತ್ತವರೊಳಗಿಂದ ಎದ್ದುಬಂದಾಗ ಆತನ ಶಿಷ್ಯರು ಆತನ ಈ ಮಾತನ್ನು ಜ್ಞಾಪಿಸಿಕೊಂಡರು. ಅವರು ಪವಿತ್ರ ಗ್ರಂಥವನ್ನು ಮತ್ತು ಆತನು ಹೇಳಿದ ಮಾತುಗಳನ್ನು ನಂಬಿದರು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.
Kannada BSI Bible 2016
ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಆತನು ಸತ್ತು ಬದುಕಿ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಶಾಸ್ತ್ರದಲ್ಲಿ ಬರೆದದ್ದನ್ನೂ ಆತನ ಮಾತನ್ನೂ ಅವರು ನಂಬುವವರಾದರು.
Kannada Bible (KNCL) BSI 2016
ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದಾಗ, ಅವರ ಶಿಷ್ಯರು ಅವರು ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಪವಿತ್ರ ವೇದವನ್ನೂ ಯೇಸು ತಮಗೆ ಹೇಳಿದ ಮಾತನ್ನೂ ನಂಬಿದರು.