John 2:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರ ಬಗ್ಗೆ ಆತನಿಗೆ ಯಾರೂ ತಿಳಿಸುವ ಅಗತ್ಯವಿರಲಿಲ್ಲ. ಮನುಷ್ಯನ ಮನಸ್ಸಿನಲ್ಲಿ ಏನಿದೆ ಎಂಬುದು ಯೇಸುವಿಗೆ ಗೊತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.
Kannada BSI Bible 2016
ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಪ್ರತಿಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾವನೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.
Kannada Bible (KNCL) BSI 2016
ಜನರನ್ನು ಕುರಿತು ಯಾರೂ ಅವರಿಗೆ ತಿಳಿಸಬೇಕಾದ ಪ್ರಮೇಯವಿರಲಿಲ್ಲ. ಮಾನವನ ಅಂತರಂಗ ಅವರಿಗೆ ಬಹಿರಂಗವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.