John 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಲ್ಲಿನಿಂದ ಮಾಡಿದ ಆರು ದೊಡ್ಡ ಬಾನೆಗಳು ಅಲ್ಲಿದ್ದವು. ಯೆಹೂದ್ಯರು ಶುದ್ಧಾಚಾರಗಳಿಗಾಗಿ ಈ ಕಲ್ಲಿನ ಬಾನೆಗಳನ್ನು ಉಪಯೋಗಿಸುತ್ತಿದ್ದರು. ಪ್ರತಿಯೊಂದು ಬಾನೆಯೂ ಸುಮಾರು ನೂರು ಲೀಟರ್‌ಗಳಷ್ಟು ನೀರು ಹಿಡಿಯುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.
Kannada BSI Bible 2016
ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರ ಶುದ್ಧಾಚಾರದ ಪದ್ಧತಿಯ ಪ್ರಕಾರ ಎರಡು ಮೂರು ಕೊಳಗ ನೀರು ಹಿಡಿಯುವ ಆರು ಕಲ್ಲಿನ ಬಾನೆಗಳು ಅಲ್ಲಿ ಇಟ್ಟಿದ್ದವು.
Kannada Bible (KNCL) BSI 2016
ಯೆಹೂದ್ಯರ ಶುದ್ಧಾಚಾರ ಪದ್ಧತಿಯಂತೆ ಆರು ಕಲ್ಲುಬಾನೆಗಳನ್ನು ಅಲ್ಲಿ ಇಟ್ಟಿದ್ದರು. ಅವು ಒಂದೊಂದೂ ಎರಡು ಮೂರು ಕೊಡ ನೀರು ಹಿಡಿಯುವಷ್ಟು ದೊಡ್ಡದಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರ ಶುದ್ಧಾಚಾರದ ಪ್ರಕಾರ ಅಲ್ಲಿ ಕಲ್ಲಿನ ಆರು ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಡದ ಅಳತೆಯುಳ್ಳದ್ದಾಗಿತ್ತು.