John 2:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮದುವೆಯ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿ ನೋಡಿದನು. ದ್ರಾಕ್ಷಾರಸವು ಎಲ್ಲಿಂದ ಬಂತೆಂಬುದು ಅವನಿಗೆ ಗೊತ್ತಿರಲಿಲ್ಲ. ಆದರೆ ಅದು ಆ ಸೇವಕರಿಗೆ ತಿಳಿದಿತ್ತು. ಮದುವೆಯ ಮೇಲ್ವಿಚಾರಕನು ಮದುಮಗನನ್ನು ಕರೆದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,
Kannada BSI Bible 2016
ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಎಲ್ಲಿಂದ ಬಂತೋ ನೀರನ್ನು ತೋಡಿದ ಕೆಲಸದವರಿಗೆ ತಿಳಿದಿತ್ತೇ ಹೊರತು ಔತಣದ ಪಾರುಪತ್ಯಗಾರನಿಗೆ ತಿಳಿಯದಿರಲಾಗಿ ಅವನು ಅಷ್ಟರೊಳಗೆ ದ್ರಾಕ್ಷಾರಸವಾದ ಆ ನೀರನ್ನು ರುಚಿನೋಡಿದಾಗ
Kannada Bible (KNCL) BSI 2016
ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರಿನ ರುಚಿ ನೋಡಿದನು. ಅದು ಎಲ್ಲಿಂದ ಬಂದಿತೆಂಬುದು ಅವನಿಗೆ ತಿಳಿದಿರಲಿಲ್ಲ. ನೀರನ್ನು ತೋಡಿಕೊಂಡು ಬಂದ ಸೇವಕರಿಗೆ ಮಾತ್ರ ತಿಳಿದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂತೆಂದು ಅವನಿಗೆ ತಿಳಿದಿರಲಿಲ್ಲ. ಆದರೆ ನೀರನ್ನು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,