John 20:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭಾನುವಾರದ ಮುಂಜಾನೆ ಮಗ್ದಲದ ಮರಿಯಳು ಯೇಸುವಿನ ದೇಹವಿದ್ದ ಸಮಾಧಿಯ ಬಳಿಗೆ ಬಂದಳು. ಆಗ ಇನ್ನೂ ಕತ್ತಲಿತ್ತು. ಸಮಾಧಿಯ ಬಾಗಿಲಿಗೆ ಮುಚ್ಚಿದ್ದ ದೊಡ್ಡ ಕಲ್ಲು ಅಲ್ಲಿಂದ ತೆಗೆದುಹಾಕಲ್ಪಟ್ಟಿರುವುದನ್ನು ಕಂಡ ಮರಿಯಳು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.
Kannada BSI Bible 2016
ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಮುಂಜಾನೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ತೆಗೆದಿರುವದನ್ನು ಕಂಡಳು.
Kannada Bible (KNCL) BSI 2016
ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಾರದ ಮೊದಲನೆಯ ದಿನದಲ್ಲಿ ಮುಂಜಾನೆ ಇನ್ನೂ ಕತ್ತಲಿರುವಾಗಲೇ ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಬಂಡೆ ತೆಗೆದು ಹಾಕಿರುವುದನ್ನು ಕಂಡಳು.