John 20:12 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ದೇವದೂತರನ್ನು ಕಂಡಳು. ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಅವರಲ್ಲೊಬ್ಬನು ಯೇಸುವಿನ ತಲೆಯಿದ್ದ ಕಡೆಯಲ್ಲಿಯೂ ಮತ್ತೊಬ್ಬನು ಪಾದವಿದ್ದ ಕಡೆಯಲ್ಲಿಯೂ ಕುಳಿತುಕೊಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು.
Kannada BSI Bible 2016
ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬೆಳ್ಳಗಿರುವ ವಸ್ತ್ರಗಳನ್ನು ಹೊದ್ದುಕೊಂಡ ಇಬ್ಬರು ದೇವದೂತರನ್ನು ಕಂಡಳು; ಅವರಲ್ಲಿ ಒಬ್ಬನು ತಲೆಯಿದ್ದ ಕಡೆಯಲ್ಲಿ ಒಬ್ಬನು ಕಾಲಿದ್ದ ಕಡೆಯಲ್ಲಿ ಕೂತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ಯೇಸುವಿನ ತಲೆಯ ಕಡೆಗೂ ಮತ್ತೊಬ್ಬನು ಅವರ ಪಾದಗಳಿದ್ದ ಕಡೆಗೂ ಕುಳಿತಿರುವುದನ್ನು ಕಂಡಳು.