John 20:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವದೂತರು ಮರಿಯಳಿಗೆ, “ಅಮ್ಮಾ, ಏಕೆ ಅಳುತ್ತಿರುವೆ?” ಎಂದು ಕೇಳಿದರು. ಮರಿಯಳು, “ನನ್ನ ಪ್ರಭುವಿನ ದೇಹವನ್ನು ಕೆಲವು ಜನರು ತೆಗೆದುಕೊಂಡು ಹೋಗಿದ್ದಾರೆ. ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.
Kannada BSI Bible 2016
ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆಕೆಯನ್ನು - ಅಮ್ಮಾ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆ - ನನ್ನ ಸ್ವಾವಿುಯನ್ನು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.
Kannada Bible (KNCL) BSI 2016
ಅವರು ಆಕೆಯನ್ನು, “ಏಕಮ್ಮಾ ಅಳುತ್ತಿರುವೆ?” ಎಂದು ಕೇಳಿದರು. “ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು ಅವರಿಗೆ, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಕರ್ತನನ್ನು ಅವರು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ,” ಎಂದಳು.