John 20:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರಿಯಳು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದನ್ನು ಕಂಡಳು. ಆದರೆ ಆತನು ಯೇಸು ಎಂಬುದು ಆಕೆಗೆ ಗೊತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ.
Kannada BSI Bible 2016
ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಹೇಳಿ ತಿರುಗಿಕೊಂಡು ಯೇಸು ನಿಂತಿರುವದನ್ನು ಕಂಡಳು, ಆದರೆ ಆತನು ಯೇಸು ಅಂತ ಆಕೆಗೆ ತಿಳಿಯಲಿಲ್ಲ.
Kannada Bible (KNCL) BSI 2016
ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಆಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು. ಆದರೆ ಅವರು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ.