John 20:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಆಕೆಯನ್ನು “ಅಮ್ಮಾ ಏಕೆ ಅಳುತ್ತಿರುವೆ? ನೀನು ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಿದನು. ಇವನು ತೋಟವನ್ನು ನೋಡಿಕೊಳ್ಳುವವನಿರಬಹುದೆಂದು ಮರಿಯಳು ಯೋಚಿಸಿಕೊಂಡು ಅವನಿಗೆ, “ಅಯ್ಯಾ, ನೀನು ಯೇಸುವನ್ನು ತೆಗೆದುಕೊಂಡು ಹೋದೆಯಾ? ಆತನನ್ನು ಎಲ್ಲಿಟ್ಟಿರುವೆ, ನನಗೆ ಹೇಳು. ನಾನು ಹೋಗಿ ಆತನನ್ನು ತೆಗೆದು ಕೊಳ್ಳುತ್ತೇನೆ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು.
Kannada BSI Bible 2016
ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಆಕೆಯನ್ನು - ಅಮ್ಮಾ, ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ? ಎಂದು ಕೇಳಲು ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ - ಅಯ್ಯಾ, ನೀನು ಆತನನ್ನು ಎತ್ತಿಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ನನಗೆ ಹೇಳು; ನಾನು ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದಳು.
Kannada Bible (KNCL) BSI 2016
ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ? ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಲು, ಆಕೆಯು ಅವರು ತೋಟಗಾರನೆಂದು ನೆನಸಿ ಅವರಿಗೆ, “ಅಯ್ಯಾ, ನೀನು ಅವರನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಅವರನ್ನು ತೆಗೆದುಕೊಂಡು ಹೋಗುತ್ತೇನೆ,” ಎಂದಳು.