John 20:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಆಕೆಗೆ, “ಮರಿಯಳೇ” ಎಂದನು. ಮರಿಯಳು ಯೇಸುವಿನ ಕಡೆಗೆ ತಿರುಗಿ, ಯೆಹೂದ್ಯರ ಭಾಷೆಯಲ್ಲಿ \tl “ರಬ್ಬೂನಿ”\tl* ಎಂದಳು. (ರಬ್ಬೂನಿ ಎಂದರೆ “ಗುರು”)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.
Kannada BSI Bible 2016
ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಆಕೆಗೆ - ಮರಿಯಳೇ, ಎಂದು ಹೇಳಿದನು. ಆಕೆ ತಿರುಗಿಕೊಂಡು ಇಬ್ರಿಯ ಮಾತಿನಲ್ಲಿ - ರಬ್ಬೂನಿ, ಅಂದಳು. (ರಬ್ಬೂನಿ ಅಂದರೆ ಗುರುವೇ ಎಂದು ಅರ್ಥ).
Kannada Bible (KNCL) BSI 2016
ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ತಿರುಗಿಕೊಂಡು ಹೀಬ್ರೂ ಭಾಷೆಯಲ್ಲಿ ಅವರಿಗೆ, “ರಬ್ಬೂನಿ!” ಎಂದಳು. ಹಾಗೆಂದರೆ “ಬೋಧಕನೇ” ಎಂದರ್ಥ.