John 20:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.
Kannada BSI Bible 2016
ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.
Kannada Bible (KNCL) BSI 2016
ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.