John 20:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಹೋಗಿ, “ನಾನು ಪ್ರಭುವನ್ನು ಕಂಡೆನು!” ಎಂದು ಹೇಳಿದಳು. ಮತ್ತು ಯೇಸು ಹೇಳಿದ ಸಂಗತಿಗಳನ್ನು ಆಕೆ ಅವರಿಗೆ ತಿಳಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಗ್ದಲದ ಮರಿಯಳು ಹೋಗಿ “ನಾನು ಕರ್ತನನ್ನು ನೋಡಿದ್ದೇನೆ,” ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.
Kannada BSI Bible 2016
ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಗ್ದಲದ ಮರಿಯಳು ಹೋಗಿ - ನಾನು ಸ್ವಾವಿುಯವರನ್ನು ನೋಡಿದ್ದೇನೆ; ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.
Kannada Bible (KNCL) BSI 2016
ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, “ನಾನು ಪ್ರಭುವನ್ನು ಕಂಡೆ. ಅವರು ಹೀಗೆಲ್ಲಾ ಹೇಳಿದರು,” ಎಂದು ತಿಳಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮಗ್ದಲದ ಮರಿಯಳು ಬಂದು, “ನಾನು ಕರ್ತನನ್ನು ಕಂಡಿದ್ದೇನೆ,” ಎಂದು ಹೇಳಿ, ಅವರು ತನಗೆ ಈ ಸಂಗತಿಗಳನ್ನು ಹೇಳಿದರೆಂದು ಶಿಷ್ಯರಿಗೆ ತಿಳಿಸಿದಳು.