John 20:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು.
Kannada BSI Bible 2016
ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ದಿವಸದ ಅಂದರೆ ವಾರದ ಮೊದಲನೆಯ ದಿವಸದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಲುಗಳನ್ನು ಮುಚ್ಚಿಕೊಂಡಿರಲು ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.
Kannada Bible (KNCL) BSI 2016
ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಭಾನುವಾರದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿದ್ದ ಮನೆಯ ಬಾಗಿಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದು ಅವರಿಗೆ ಹೇಳಿದರು.