John 20:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೀಮೋನ್ ಪೇತ್ರನ ಮತ್ತು (ಯೇಸು ಪ್ರೀತಿಸುತ್ತಿದ್ದ) ಮತ್ತೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಅವರು ಸಮಾಧಿಯೊಳಗಿಂದ ಪ್ರಭುವನ್ನು ತೆಗೆದುಕೊಂಡಿದ್ದಾರೆ, ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು
Kannada BSI Bible 2016
ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ಸೀಮೋನ ಪೇತ್ರನ ಬಳಿಗೂ ಯೇಸುವಿಗೆ ಪ್ರಿಯನಾಗಿದ್ದ ಆ ಮತ್ತೊಬ್ಬ ಶಿಷ್ಯನ ಬಳಿಗೂ ಓಡಿ ಬಂದು ಅವರಿಗೆ - ಸ್ವಾವಿುಯನ್ನು ಸಮಾಧಿಯಿಂದ ತೆಗೆದುಕೊಂಡು ಹೋಗಿ ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು ಹೇಳಿದಳು.
Kannada Bible (KNCL) BSI 2016
ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ, ಅವರು ಕರ್ತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ,” ಎಂದು ಹೇಳಿದಳು.