John 20:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ, ಅವರ ಪಾಪಗಳನ್ನು ಕ್ಷಮಿಸಲಾಗುವುದು. ನೀವು ಯಾರ ಪಾಪಗಳನ್ನು ಕ್ಷಮಿಸುವುದಿಲ್ಲವೋ, ಅವರ ಪಾಪಗಳಿಗೆ ಕ್ಷಮೆ ದೊರೆಯುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು.
Kannada BSI Bible 2016
ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯಾರ ಪಾಪಗಳನ್ನು ಕ್ಷವಿುಸಿಬಿಡುತ್ತೀರೋ ಅವರಿಗೆ ಅವುಗಳ ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ಕ್ಷವಿುಸದೆ ಉಳಿಸುತ್ತೀರೋ ಅವರಿಗೆ ಅವುಗಳು ಉಳಿಯುತ್ತವೆ ಅಂದನು.
Kannada Bible (KNCL) BSI 2016
ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು. ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲಾಗುವುದು ಮತ್ತು ಯಾರ ಪಾಪಗಳನ್ನು ನೀವು ಉಳಿಸುತ್ತೀರೋ ಅವು ಅವರಿಗೆ ಉಳಿಸಲಾಗುವುದು,” ಎಂದು ಹೇಳಿದರು.