John 20:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಬಂದಾಗ ದಿದುಮನೆಂಬ ತೋಮನು ಶಿಷ್ಯರೊಂದಿಗೆ ಇರಲಿಲ್ಲ. ಹನ್ನೆರಡು ಮಂದಿ ಶಿಷ್ಯರಲ್ಲಿ ತೋಮನೂ ಒಬ್ಬನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ.
Kannada BSI Bible 2016
ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರೊಳಗೆ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಸಂಗಡ ಇರಲಿಲ್ಲ.
Kannada Bible (KNCL) BSI 2016
ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸು ಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ಬಂದಾಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮನು ಎನಿಸಿಕೊಂಡ ತೋಮನು ಅವರ ಸಂಗಡ ಇರಲಿಲ್ಲ.