John 20:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಳಿದ ಶಿಷ್ಯರು ತೋಮನಿಗೆ, “ನಾವು ಪ್ರಭುವನ್ನು ನೋಡಿದೆವು” ಎಂದು ಹೇಳಿದರು. ಆದರೆ ತೋಮನು, “ಆತನ ಕೈಗಳಲ್ಲಿರುವ ಮೊಳೆಯ ಗಾಯದ ಗುರುತುಗಳನ್ನು ನಾನು ನೋಡುವವರೆಗೆ, ಮೊಳೆಗಳನ್ನು ಜಡಿದಿದ್ದ ಸ್ಥಳದಲ್ಲಿ ನನ್ನ ಬೆರಳನ್ನಿಡುವವರೆಗೆ ಮತ್ತು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟುನೋಡುವವರೆಗೆ ನಾನು ಅದನ್ನು ನಂಬುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.
Kannada BSI Bible 2016
ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಉಳಿದ ಶಿಷ್ಯರು - ನಾವು ಸ್ವಾವಿುಯನ್ನು ನೋಡಿದ್ದೇವೆ ಎಂದು ಅವನಿಗೆ ಹೇಳಿದರು. ಅದಕ್ಕೆ ಅವನು - ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಿಮ್ಮ ಮಾತನ್ನು ನಂಬುವದೇ ಇಲ್ಲ ಅಂದನು.
Kannada Bible (KNCL) BSI 2016
ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ಕಂಡಿದ್ದೇವೆ,” ಎಂದು ಹೇಳಿದರು. ಆದರೆ ಅವನು ಅವರಿಗೆ, “ನಾನು ಅವರ ಕೈಗಳಲ್ಲಿ ಮೊಳೆಗಳ ಗುರುತನ್ನು ಕಂಡು, ಅದರಲ್ಲಿ ನನ್ನ ಬೆರಳನ್ನು ಇಟ್ಟು ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಂಬುವುದೇ ಇಲ್ಲ,” ಎಂದು ಹೇಳಿದನು.