John 20:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ವಾರದ ನಂತರ ಶಿಷ್ಯರು ಮನೆಯೊಂದರಲ್ಲಿ ಒಟ್ಟಾಗಿ ಸೇರಿದ್ದರು. ತೋಮನು ಅವರೊಂದಿಗೆ ಇದ್ದನು. ಬಾಗಿಲುಗಳನ್ನು ಮುಚ್ಚಲಾಗಿತ್ತು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”
Kannada BSI Bible 2016
ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ತಿರಿಗಿ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.
Kannada Bible (KNCL) BSI 2016
ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಂಟು ದಿವಸಗಳಾದ ಮೇಲೆ ಯೇಸುವಿನ ಶಿಷ್ಯರು ಪುನಃ ಮನೆಯ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಿಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದರು.