John 20:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿಡು. ನನ್ನ ಕೈಗಳನ್ನು ನೋಡು. ನಿನ್ನ ಕೈಯನ್ನು ನನ್ನ ಪಕ್ಕೆಯಲ್ಲಿ ಹಾಕು. ಸಂಶಯಪಡದೆ ನಂಬುವವನಾಗು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.
Kannada BSI Bible 2016
ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ತೋಮನಿಗೆ - ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು; ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬದವನಾಗಿರಬೇಡ, ನಂಬುವವನಾಗು ಎಂದು ಹೇಳಿದನು.
Kannada Bible (KNCL) BSI 2016
ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿ ಇಡು. ನನ್ನ ಕೈಗಳನ್ನು ನೋಡು, ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಇಡು. ನಂಬದವನಾಗಿರಬೇಡ, ನಂಬುವವನಾಗಿರು,” ಎಂದರು.