John 20:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತೋಮನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದೆ. ನನ್ನನ್ನು ನೋಡದೆ ನಂಬುವವರು ನಿಜವಾಗಿಯೂ ಧನ್ಯರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು.
Kannada BSI Bible 2016
ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನಿಗೆ - ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಎಂದು ಹೇಳಿದನು.
Kannada Bible (KNCL) BSI 2016
ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ನೀನು ನನ್ನನ್ನು ಕಂಡಿದ್ದರಿಂದ ನಂಬಿದ್ದೀಯಾ? ಕಾಣದೆ ನಂಬಿದವರು ಧನ್ಯರು,” ಎಂದರು.