John 20:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲದೆ ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆಯನ್ನೂ ಅವನು ಕಂಡನು. ಆ ಬಟ್ಟೆಯು ಸುತ್ತಲ್ಪಟ್ಟು, ಇತರ ನಾರುಬಟ್ಟೆಗಳಿಂದ ಪ್ರತ್ಯೇಕವಾಗಿ ಬಿದ್ದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು.
Kannada BSI Bible 2016
ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ನಾರುಬಟ್ಟೆಗಳ ಕೂಡ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೇ ಇರುವದನ್ನೂ ನೋಡಿದನು.
Kannada Bible (KNCL) BSI 2016
ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ತಲೆಗೆ ಸುತ್ತಿದ ವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು.