John 21:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ, ಯೇಸು ತನ್ನ ಶಿಷ್ಯರಿಗೆ ತಿಬೇರಿಯ (ಗಲಿಲಾಯ) ಸರೋವರದ ಬಳಿ ಕಾಣಿಸಿಕೊಂಡನು. ಅದು ಹೀಗೆ ನಡೆಯಿತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:
Kannada BSI Bible 2016
ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತಿರಿಗಿ ತನ್ನನ್ನು ತೋರಿಸಿಕೊಂಡನು.
Kannada Bible (KNCL) BSI 2016
ತರುವಾಯ ಯೇಸು ಸ್ವಾಮಿ ತಮ್ಮ ಶಿಷ್ಯರಿಗೆ ಮತ್ತೊಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳಾದ ಮೇಲೆ ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಶಿಷ್ಯರಿಗೆ ತಮ್ಮನ್ನು ಪುನಃ ತೋರಿಸಿಕೊಂಡರು. ಅವರು ಈ ರೀತಿಯಾಗಿ ಕಾಣಿಸಿಕೊಂಡರು: