John 21:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೀಮೋನ್ ಪೇತ್ರನು ದೋಣಿಯೊಳಕ್ಕೆ ಹೋಗಿ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದನು. ಬಲೆಯು ದೊಡ್ಡ ಮೀನುಗಳಿಂದ ತುಂಬಿತ್ತು. ಅದರಲ್ಲಿ 153 ಮೀನುಗಳಿದ್ದವು. ಅವು ಬಹಳ ಭಾರವಾಗಿದ್ದರೂ ಬಲೆಯು ಹರಿದುಹೋಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.
Kannada BSI Bible 2016
ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೀಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ಭೂವಿುಗೆ ಎಳಕೊಂಡು ಬಂದನು. ಅದು ನೂರೈವತ್ತು ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆ ಹರಿಯಲಿಲ್ಲ.
Kannada Bible (KNCL) BSI 2016
ಸಿಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳೆದುತಂದನು. ಬಲೆಯ ತುಂಬ ದೊಡ್ಡಮೀನುಗಳು - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೀಮೋನ ಪೇತ್ರನು ಹೋಗಿ ನೂರೈವತ್ತಮೂರು ದೊಡ್ಡ ಮೀನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ.