John 21:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಊಟಮಾಡಿದ ಮೇಲೆ, ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ಇಲ್ಲಿರುವ ಇವರು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಪೇತ್ರನು, “ಹೌದು ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.
Kannada BSI Bible 2016
ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನನ್ನು - ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಮರಿಗಳನ್ನು ಮೇಯಿಸು ಎಂದು ಹೇಳಿದನು.
Kannada Bible (KNCL) BSI 2016
ಅವರೆಲ್ಲರ ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಉಪಹಾರ ಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ, “ಯೋಹಾನನ ಮಗ ಸೀಮೋನನೇ, ನೀನು ಇವರಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಯೇಸುವಿಗೆ, “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ,” ಎಂದನು. ಅದಕ್ಕೆ ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದು ಹೇಳಿದರು.