John 21:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎರಡನೆಯ ಸಾರಿ ಯೇಸು ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಪೇತ್ರನು, “ಹೌದು, ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಕಾಯಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.
Kannada BSI Bible 2016
ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತಿರಿಗಿ ಎರಡನೆಯ ಸಾರಿ ಅವನನ್ನು - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಗಳನ್ನು ಕಾಯಿ ಎಂದು ಹೇಳಿದನು.
Kannada Bible (KNCL) BSI 2016
ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಪೇತ್ರನು ಯೇಸುವಿಗೆ, “ಹೌದು ಕರ್ತನೇ, ನಾನು ನಿಮ್ಮ ಮೇಲೆ ಮಮತೆ ಇಟ್ಟಿದ್ದೇನೆಂದು ನೀವೇ ಬಲ್ಲಿರಿ,” ಎಂದನು. ಅದಕ್ಕೆ ಯೇಸು ಅವನಿಗೆ, “ನನ್ನ ಕುರಿಗಳನ್ನು ರಕ್ಷಿಸು,” ಎಂದು ಹೇಳಿದರು.