John 21:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನೀನು ಯೌವನಸ್ಥನಾಗಿದ್ದಾಗ, ನಡುಕಟ್ಟಿಕೊಂಡು ನಿನಗೆ ಇಷ್ಟವಾದ ಕಡೆಗೆಲ್ಲಾ ಹೋದೆ. ಆದರೆ ನೀನು ಮುದುಕನಾದಾಗ, ನಿನ್ನ ಕೈಗಳನ್ನು ಚಾಚುವೆ ಮತ್ತು ಬೇರೊಬ್ಬನು ನಿನ್ನ ನಡುಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ನಡೆಸಿಕೊಂಡು ಹೋಗುವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.
Kannada BSI Bible 2016
ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯೌವನಸ್ಥನಾಗಿದ್ದಾಗ ನೀನೇ ನಡುವನ್ನು ಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿಕೊಂಡು ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂಡು ಹೋಗುವನು ಎಂದು ಹೇಳಿದನು.
Kannada Bible (KNCL) BSI 2016
ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, “ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟ ಬಂದ ಕಡೆಗೆ ತಿರುಗಾಡುತ್ತಿದ್ದೆ. ಆದರೆ ನೀನು ವೃದ್ಧನಾದಾಗ ನಿನ್ನ ಕೈಗಳನ್ನು ಚಾಚುವೆ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು,” ಎಂದರು.