John 21:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
(ದೇವರನ್ನು ಮಹಿಮೆಪಡಿಸುವುದಕ್ಕಾಗಿ ಪೇತ್ರನು ಯಾವ ರೀತಿ ಸಾಯುತ್ತಾನೆ ಎಂಬುದನ್ನು ಸೂಚಿಸಲು ಯೇಸು ಹೀಗೆ ಹೇಳಿದನು.) ಬಳಿಕ ಯೇಸು ಪೇತ್ರನಿಗೆ, “ನನ್ನನ್ನು ಹಿಂಬಾಲಿಸು!” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Kannada BSI Bible 2016
ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಎಂಥಾ ಸಾವಿನಿಂದ ದೇವರನ್ನು ಮಹಿಮೆಪಡಿಸುವನು ಎಂಬದನ್ನು ಆತನು ಈ ಮಾತಿನಿಂದ ಸೂಚಿಸಿದನು. ಇದನ್ನು ಹೇಳಿ ಆತನು ಅವನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
Kannada Bible (KNCL) BSI 2016
ಪೇತ್ರನು ಎಂಥ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, “ನೀನು ನನ್ನನ್ನು ಹಿಂಬಾಲಿಸಿ ಬಾ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಎಂಥ ಮರಣದಿಂದ ದೇವರನ್ನು ಮಹಿಮೆ ಪಡಿಸುವನು ಎಂಬುದನ್ನು ಸೂಚಿಸಿ ಯೇಸು ಇದನ್ನು ಹೇಳಿದರು. ಅವರು ಇದನ್ನು ಹೇಳಿ ಪೇತ್ರನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.