John 21:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿನ ಪ್ರೀತಿಯ ಶಿಷ್ಯನು ತಮ್ಮ ಹಿಂದೆ ನಡೆದುಕೊಂಡು ಬರುತ್ತಿರುವುದನ್ನು ಕಂಡನು. (ರಾತ್ರಿಭೋಜನದ ಸಮಯದಲ್ಲಿ ಯೇಸುವಿನ ಎದೆಯ ಕಡೆಗೆ ಬಾಗಿ, “ಪ್ರಭುವೇ, ನಿನಗೆ ದ್ರೋಹ ಮಾಡುವವನು ಯಾರು?” ಎಂದು ಕೇಳಿದ ಶಿಷ್ಯನೇ ಇವನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.
Kannada BSI Bible 2016
ಊಟದಲ್ಲಿ ಆತನ ಎದೆಗೆ ಒರಗಿಕೊಂಡು-- ಕರ್ತನೇ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದಂಥ ಮತ್ತು ಯೇಸು ಪ್ರೀತಿಸಿದಂಥ ಶಿಷ್ಯನು ಹಿಂದೆ ಬರುವದನ್ನು ಪೇತ್ರನು ಹಿಂತಿರುಗಿ ನೋಡಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರನು ತಿರುಗಿಕೊಂಡು ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವದನ್ನು ಕಂಡನು. ಆ ಶಿಷ್ಯನು ಊಟದಲ್ಲಿ ಯೇಸುವಿನ ಎದೆಯ ಕಡೆಗೆ ಬಾಗಿ - ಸ್ವಾಮೀ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದವನೇ.
Kannada Bible (KNCL) BSI 2016
ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ತಿರುಗಿ ಕಂಡಾಗ ಯೇಸುವನ್ನು ಪ್ರೀತಿಸಿದಂಥ ಶಿಷ್ಯನು ಅವರ ಹಿಂದೆ ಬರುವುದನ್ನು ಕಂಡನು. ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದಂಥವನು ಇವನೇ.