John 21:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಸಹೋದರರ (ಶಿಷ್ಯರ) ಮಧ್ಯೆ ಒಂದು ಕಥೆಯೇ ಹರಡಿಕೊಂಡಿತು. ಯೇಸುವಿನ ಪ್ರೀತಿಯ ಈ ಶಿಷ್ಯನು ಸಾಯುವುದಿಲ್ಲವೆಂದು ಅವರು ಹೇಳುತ್ತಿದ್ದರು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಹೇಳಲಿಲ್ಲ. “ನಾನು ಬರುವ ತನಕ ಅವನು ಜೀವದಿಂದ ಇರಬೇಕೆಂಬುದು ನನ್ನ ಇಷ್ಟವಾಗಿದ್ದರೆ ಅದರಿಂದ ನಿನಗೇನು?” ಎಂದಷ್ಟೇ ಆತನು ಹೇಳಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು.
Kannada BSI Bible 2016
ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರ ದೆಸೆಯಿಂದ ಆ ಶಿಷ್ಯನು ಸಾಯುವದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಆತನು ಹೇಳಿದನು.
Kannada Bible (KNCL) BSI 2016
ಇದರಿಂದಾಗಿ ಆ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು. ಯೇಸು, ‘ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು?’ ಎಂದು ಹೇಳಿದರೇ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೂ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದರು.