John 21:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಸಂಗತಿಗಳನ್ನು ಈಗ ಬರೆದಿರುವವನು ಮತ್ತು ಇವುಗಳ ವಿಷಯವಾಗಿ ಈಗ ಸಾಕ್ಷಿ ಹೇಳಿರುವ ಶಿಷ್ಯನು ಅವನೇ. ಅವನು ಹೇಳುವುದು ಸತ್ಯವೆಂದು ನಮಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
Kannada BSI Bible 2016
ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಗತಿಗಳನ್ನು ಬರೆದು ಇವುಗಳ ವಿಷಯವಾಗಿ ಸಾಕ್ಷಿ ಹೇಳುವ ಶಿಷ್ಯನು ಇವನೇ. ಇವನ ಸಾಕ್ಷಿ ಸತ್ಯವೆಂದು ನಾವು ಬಲ್ಲೆವು.
Kannada Bible (KNCL) BSI 2016
ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಅವನೇ, ಅವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.