John 21:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವುಗಳಲ್ಲಿ ಪ್ರತಿಯೊಂದನ್ನೂ ಬರೆಯುವುದಾದರೆ, ಬರೆಯಲ್ಪಡುವ ಪುಸ್ತಕಗಳನ್ನು ಇಡೀ ಪ್ರಪಂಚವೇ ಹಿಡಿಸಲಾರದೆಂದು ನಾನು ನೆನಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
Kannada BSI Bible 2016
ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೇಸು ಮಾಡಿದ್ದು ಇನ್ನೂ ಬಹಳವಿದೆ; ಅದನ್ನೆಲ್ಲಾ ಒಂದೊಂದಾಗಿ ಬರೆಯುವದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸದೆ ಹೋದೀತೆಂದು ನಾನು ನೆನಸುತ್ತೇನೆ.
Kannada Bible (KNCL) BSI 2016
ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶಃ ಲೋಕವೇ ಹಿಡಿಸಲಾರದೆಂದು ನೆನಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೇಸು ಮಾಡಿದ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನು ಒಂದೊಂದಾಗಿ ಬರೆಯುವುದಾದರೆ, ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಸಾಕಾಗುವುದಿಲ್ಲ ಎಂದು ನಾನು ನೆನಸುತ್ತೇನೆ.