John 21:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತಿದ್ದೇನೆ” ಎಂದನು. ಉಳಿದ ಶಿಷ್ಯರು, “ನಾವೂ ನಿನ್ನೊಂದಿಗೆ ಬರುತ್ತೇವೆ” ಎಂದು ಹೇಳಿದರು. ಅಂತೆಯೇ ಶಿಷ್ಯರೆಲ್ಲಾ ಹೊರಟು ದೋಣಿಯನ್ನು ಹತ್ತಿದರು. ಅವರು ರಾತ್ರಿಯೆಲ್ಲಾ ಬಲೆ ಬೀಸಿದರೂ ಒಂದು ಮೀನೂ ಸಿಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.
Kannada BSI Bible 2016
ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ ಸೀಮೋನ ಪೇತ್ರನು - ನಾನು ಮೀನು ಹಿಡಿಯುವದಕ್ಕೆ ಹೋಗುತ್ತೇನೆಂದು ಹೇಳಲು ಅವರು - ನಾವೂ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಒಂದು ಮೀನೂ ಸಿಕ್ಕಲಿಲ್ಲ.
Kannada Bible (KNCL) BSI 2016
ಆಗ ಸಿಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದನು. ಮಿಕ್ಕವರು, “ನಾವೂ ನಿನ್ನೊಡನೆ ಬರುತ್ತೇವೆ,” ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು. ಆ ರಾತ್ರಿಯೆಲ್ಲಾ ಅವರಿಗೆ ಒಂದು ಮೀನೂ ಸಿಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೀಮೋನ ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದು ಹೇಳಲು ಅವರು ಅವನಿಗೆ, “ನಾವು ಸಹ ನಿನ್ನ ಸಂಗಡ ಬರುತ್ತೇವೆ,” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.