John 21:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂದು ಮುಂಜಾನೆಯಾದಾಗ, ಯೇಸು ತೀರದಲ್ಲಿ ನಿಂತುಕೊಂಡಿದ್ದನು. ಆದರೆ ಆತನೇ ಯೇಸು ಎಂಬುದು ಶಿಷ್ಯರಿಗೆ ಗೊತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ.
Kannada BSI Bible 2016
ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು; ಆದಾಗ್ಯೂ ಶಿಷ್ಯರು ಆತನನ್ನು ಯೇಸುವೆಂದು ತಿಳಿಯಲಿಲ್ಲ.
Kannada Bible (KNCL) BSI 2016
ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರು ಯೇಸು ಎಂದು ಶಿಷ್ಯರಿಗೆ ಹೊಳೆಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರೇ ಯೇಸು ಎಂದು ಶಿಷ್ಯರಿಗೆ ತಿಳಿಯಲಿಲ್ಲ.