John 21:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಆತನು ತನ್ನ ಶಿಷ್ಯರಿಗೆ, “ಮಕ್ಕಳೇ, ನಿಮಗೆ ಮೀನು ಸಿಕ್ಕಿತೋ?” ಎಂದು ಕೇಳಿದನು. ಶಿಷ್ಯರು, “ಇಲ್ಲ” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.
Kannada BSI Bible 2016
ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಅವರನ್ನು - ಮಕ್ಕಳಿರಾ, ಊಟಕ್ಕೆ ನಿಮಗೆ ಏನೂ ಇಲ್ಲವೇ ಎಂದು ಕೇಳಲು ಅವರು ಇಲ್ಲವೆಂದು ಉತ್ತರಕೊಟ್ಟರು.
Kannada Bible (KNCL) BSI 2016
ಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವರಿಗೆ, “ಮಕ್ಕಳೇ, ನಿಮ್ಮ ಬಳಿಯಲ್ಲಿ ಮೀನುಗಳಿವೆಯೋ?” ಎಂದು ಕೇಳಲು, ಅವರು ಯೇಸುವಿಗೆ, “ಇಲ್ಲ,” ಎಂದು ಉತ್ತರಕೊಟ್ಟರು.