John 21:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನಿಮ್ಮ ದೋಣಿಯ ಬಲಭಾಗದಲ್ಲಿ ನಿಮ್ಮ ಬಲೆ ಬೀಸಿರಿ. ಅಲ್ಲಿ ಕೆಲವು ಮೀನುಗಳು ಸಿಕ್ಕುತ್ತವೆ” ಎಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು. ಬಹಳ ಮೀನುಗಳು ಸಿಕ್ಕಿಕೊಂಡದ್ದರಿಂದ ಅವರು ಬಲೆಯನ್ನು ದೋಣಿಯೊಳಗೆ ಎಳೆದುಕೊಳ್ಳಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.
Kannada BSI Bible 2016
ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರಿಗೆ - ನೀವು ದೋಣಿಯ ಬಲಗಡೆಯಲ್ಲಿ ಬಲೆ ಬೀಸಿದರೆ ಸಿಕ್ಕುವದು ಎಂದು ಹೇಳಿದನು. ಅವರು ಹಾಗೆ ಬೀಸಿದಾಗ ಮೀನುಗಳು ಬಹಳ ಹೆಚ್ಚಾಗಿ ಸಿಕ್ಕಿದ್ದರಿಂದ ಬಲೆಯನ್ನು ಎಳೆಯುವದಕ್ಕೆ ಆಗದೆ ಹೋಯಿತು.
Kannada Bible (KNCL) BSI 2016
“ದೋಣಿಯ ಬಲಗಡೆಗೆ ಬಲೆ ಬೀಸಿರಿ; ಮೀನುಗಳು ಸಿಗುತ್ತವೆ,” ಎಂದು ಯೇಸು ಹೇಳಲು ಅವರು ಹಾಗೆಯೇ ಮಾಡಿದರು. ಆಗ ಮೀನುಗಳು ರಾಶಿರಾಶಿಯಾಗಿ ಸಿಕ್ಕಿದವು. ಬಲೆಯನ್ನು ಎಳೆಯಲೂ ಆಗದೆಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಶಿಷ್ಯರಿಗೆ, “ದೋಣಿಯ ಬಲಗಡೆಯಲ್ಲಿ ಬಲೆ ಬೀಸಿರಿ; ನಿಮಗೆ ಮೀನು ಸಿಗುತ್ತವೆ,” ಎಂದರು. ಅವರು ಬಲೆ ಬೀಸಿದಾಗ ಮೀನುಗಳ ರಾಶಿ ಬಲೆಗೆ ಬಿದ್ದದರ ದೆಸೆಯಿಂದ ಅವರಿಗೆ ಎಳೆಯುವುದಕ್ಕೆ ಆಗದೆ ಹೋಯಿತು.