John 21:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿನ ಪ್ರೀತಿಯ ಶಿಷ್ಯನು ಪೇತ್ರನಿಗೆ, “ಆ ಮನುಷ್ಯನು ಪ್ರಭುವೇ (ಯೇಸು)!” ಎಂದು ಹೇಳಿದನು. ಕೂಡಲೇ ಪೇತ್ರನು ತನ್ನ ಅಂಗಿಯನ್ನು ಹಾಕಿಕೊಂಡು, ನೀರಿಗೆ ಧುಮುಕಿದನು. (ಪೇತ್ರನು ಮೀನು ಹಿಡಿಯುವುದಕ್ಕಾಗಿ ತನ್ನ ಅಂಗಿಯನ್ನು ಬಿಚ್ಚಿಟ್ಟಿದ್ದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
Kannada BSI Bible 2016
ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ - ಅವರು ಸ್ವಾವಿುಯವರು ಎಂದು ಹೇಳಿದನು. ಸ್ವಾವಿುಯವರೆಂದು ಸೀಮೋನ ಪೇತ್ರನು ಕೇಳಿ ಮೈ ಮೇಲೆ ಬಟ್ಟೆಯಿಲ್ಲದವನಾಗಿದ್ದರಿಂದ ಒಲ್ಲಿಯನ್ನು ಸುತ್ತಿಕೊಂಡು ಸಮುದ್ರದಲ್ಲಿ ದುಮುಕಿದನು.
Kannada Bible (KNCL) BSI 2016
ಆಗ ಯೇಸುವಿನ ಆಪ್ತಶಿಷ್ಯನು ಪೇತ್ರನಿಗೆ, “ಅವರೇ ಪ್ರಭು” ಎಂದನು. ಪ್ರಭುವೆಂದು ಕೇಳಿದ್ದೇ ತಡ, ಬರೀ ಮೈಯಲ್ಲಿದ್ದ ಪೇತ್ರನು ಬಟ್ಟೆಯನ್ನು ಹಾಕಿಕೊಂಡು ನೀರಿಗೆ ಧುಮುಕಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ,” ಎಂದನು. ಅದನ್ನು ಕೇಳಿ ಸೀಮೋನ ಪೇತ್ರನು ತಾನು ತೆಗೆದುಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.