John 21:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಉಳಿದ ಶಿಷ್ಯರು ದೋಣಿಯಲ್ಲಿ ತೀರಕ್ಕೆ ಹೋದರು. ಅವರು ಬಲೆತುಂಬ ಮೀನುಗಳನ್ನು ದಡಕ್ಕೆ ಎಳೆದುಕೊಂಡು ಹೋದರು. ಅವರು ದಡದಿಂದ ಬಹುದೂರದಲ್ಲೇನೂ ಇರಲಿಲ್ಲ. ಕೇವಲ ಮುನ್ನೂರು ಅಡಿಗಳಷ್ಟು ದೂರದಲ್ಲಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.
Kannada BSI Bible 2016
ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು; (ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ; ಆದರೆ ಅದು ಇನ್ನೂರು ಮೊಳ ದಷ್ಟಿತ್ತು).
Kannada BSI JV (ಕನ್ನಡ ಸತ್ಯವೇದವು J.V. (BSI))
ದಡವು ದೂರವಾಗಿರದೆ ಹೆಚ್ಚುಕಡಿಮೆ ಇನ್ನೂರು ಮೊಳದಲ್ಲಿದ್ದರಿಂದ ಉಳಿದ ಶಿಷ್ಯರು ಮೀನು ತುಂಬಿದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.
Kannada Bible (KNCL) BSI 2016
ಮಿಕ್ಕ ಶಿಷ್ಯರು ಮೀನು ತುಂಬಿದ್ದ ಬಲೆಯನ್ನು ಎಳೆಯುತ್ತಾ ಸುಮಾರು ಮುನ್ನೂರು ಅಡಿ ದೂರದಲ್ಲಿ ಇದ್ದ ದಡಕ್ಕೆ ದೋಣಿಯಲ್ಲೇ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಳಿದ ಶಿಷ್ಯರು ಮೀನುಗಳಿದ್ದ ಬಲೆಯನ್ನು ಎಳೆಯುತ್ತಾ ಆ ದೋಣಿಯಲ್ಲಿ ಬಂದರು. ಏಕೆಂದರೆ ಅವರು ದಡದಿಂದ ಹೆಚ್ಚು ದೂರವಿರಲಿಲ್ಲ. ಸುಮಾರು ತೊಂಬತ್ತು ಮೀಟರ್ ದೂರವಿತ್ತು.